ಪೋಲಿ ಮೆಸೇಜ್ ಕಳಿಸಿದ ಪ್ರೊಫೆಸರ್​​ : ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯರಿಂದ ಧರ್ಮದೇಟು..!! – ವಿಡಿಯೋ ವೈರಲ್

ಚಂಡೀಗಢ: ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯರು ಪ್ರೊಫೆಸರೊಬ್ಬರನ್ನು ಹಿಡಿದು ಎಳೆದಾಡಿ ಥಳಿಸಿರುವ ಘಟನೆ ಪಂಜಾಬ್ ನ ಪಟಿಯಾಲ ಕಾಲೇಜಿನಲ್ಲಿ ನಡೆದಿದೆ.

ಪಟಿಯಾಲದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಮಹಿಳಾ ಕಾಲೇಜಿನ ಪ್ರೊಫೆಸರ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶವನ್ನು ಕಳುಹಿಸಿದ್ದಾನೆ. ಇದರಿಂದ ಕೋಪಗೊಂಡು ವಿದ್ಯಾರ್ಥಿನಿಯರು ಆತನನ್ನು ಹಿಡಿದು ಥಳಿಸಿದ್ದಾರೆ. ಈಗ ಈ ವಿಡಿಯೋ ವೈರಲ್ ಆಗಿದೆ.

ಅತುಲ್ ಜೋಹ್ರಿ ಪ್ರಾಧ್ಯಾಪಕ ಆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆಲ ವಿದ್ಯಾರ್ಥಿನಿಯರಿಗೆ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಆತ ಕಾಲೇಜಿನ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆ, ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮತ್ತೊಬ್ಬಳು ವಿದ್ಯಾರ್ಥಿನಿ ಈ ದೃಶ್ಯವನ್ನು ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾಳೆ.

ಆರೋಪಿ ಪ್ರಾಧ್ಯಾಪಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿಯರು ಪ್ರತಿಭಟನೆ ಕೂಡ ಮಾಡಿದ್ದಾರೆ. ನಂತರ ದೆಹಲಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಿಯನ್ನ ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಿದ್ದಂತೆ ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಮತ್ತು ದೆಹಲಿ ಪೊಲೀಸ್ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಗೆ ಮಹಿಳಾ ಸಂಘಟನೆಗಳು ಕೂಡ ಸಾಥ್ ನೀಡಿದ್ದವು.

ಪ್ರೊಫೆಸರ್ ಈ ರೀತಿಯ ಅಸಭ್ಯವಾಗಿ ವರ್ತಿಸುತ್ತಿರುವುದು ಇದೇ ಮೊದಲೇನಲ್ಲ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕನೋರ್ವ ಈ ಹಿಂದೆ ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿರುವುದಾಗಿ ವರದಿಯಾಗಿತ್ತು.

👍👍 ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಪೇಜ್ ಲೈಕ್ ಮಾಡಿ 👍👍