ಬಿಜೆಪಿ ಅಭ್ಯರ್ಥಿ ಬಿ.ಎನ್​ ವಿಜಯಕುಮಾರ್​ ರವರ ಅಕಾಲಿಕ ಮರಣ : ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ಇಂದು..! ಬಿಜೆಪಿ – ಕಾಂಗ್ರೆಸ್ ನಡುವೆ ನೇರ ಫೈಟ್

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಬಿ.ಎನ್​ ವಿಜಯಕುಮಾರ್​ರವರ ಅಕಾಲಿಕ ಮರಣದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಸಂಜೆ ಆರುಗಂಟೆಯವರೆಗೆ ಮತದಾನ ನಡೆಯಲಿದ್ದು, ಇದೇ ಬುಧವಾರ ಮತ ಎಣಿಕೆ ನಡೆಯಲಿದೆ.

ಕಣದಲ್ಲಿ ಬಿಜೆಪಿ ದಿವಂಗತ ವಿಜಯಕುಮಾರ್​ರ ಸಹೋದರ ಬಿ.ಎನ್​. ಪ್ರಹ್ಲಾದ್​ ಬಾಬುರನ್ನ ಕಣಕ್ಕಿಳಿಸಿದ್ದು, ಅವರ ಎದುರು ಕಾಂಗ್ರೆಸ್​ನಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಇನ್ನು ಸ್ವತಂತ್ರ ಅಭ್ಯರ್ಥಿಯಾಗಿ ರವಿಕೃಷ್ಣಾ ರೆಡ್ಡಿ ಚುನಾವಣಾ ಕಣದಲ್ಲಿದ್ದಾರೆ. ಈ ಮೂವರು ಸೇರಿದಂತೆ ಅಖಾಡದಲ್ಲಿ ಒಟ್ಟು 19 ಅಭ್ಯರ್ಥಿಗಳು, ಮತದಾರರು ನೀಡುವ ಭವಿಷ್ಯವನ್ನು ಎದುರುನೋಡುತ್ತಿದ್ದಾರೆ.


ಇನ್ನು ಜೆಡಿಎಸ್​ ಕಾಂಗ್ರೆಸ್​ ಅಭ್ಯರ್ಥಿಗೆ ಬೆಂಬಲ ಘೋಷಿಸಿ ಚುನಾವಣಾ ಅಖಾಡದಿಂದ ಹಿಂದೆ ಸರಿದಿದೆ. 1,02,668 ಪುರುಷ ಹಾಗೂ 1,00,500 ಮಹಿಳೆಯರು ಮತ್ತು 16 ತೃತಿಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 2,03,184 ಮತದಾರರು ಇವತ್ತು ಮತದಾನ ಮಾಡಲಿದ್ದು, ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕಾಗಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಅಲ್ಲದೆ ಈ ವ್ಯಾಪ್ತಿಯಲ್ಲಿ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ.

ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಕನ್ನಡನಾಡಿ.com ಪೇಜ್ ಲೈಕ್ ಮಾಡಿ..

>
%d bloggers like this: