ಬಿಜೆಪಿ ಕುದುರೆ ವ್ಯಾಪಾರ ಶುರು ಮಾಡಿದ್ದು, ಒಬ್ಬೊಬ್ಬ ಶಾಸಕರಿಗೆ 100 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನದ ಆಮಿಷ : ಕುಮಾರಸ್ವಾಮಿ ಬಾಂಬ್

ಬೆಂಗಳೂರು : ಬಿಜೆಪಿ ಕುದುರೆ ವ್ಯಾಪಾರ ಶುರು ಮಾಡಿದ್ದು, ಒಬ್ಬೊಬ್ಬ ಶಾಸಕರಿಗೆ 100 ಕೋಟಿ ರೂಪಾಯಿ ಕೊಡುತ್ತೇವೆ ಎಂದು ಆಮಿಷ ತೋರಿಸುತ್ತಿದ್ದಾರೆ ಅಂತಾ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ಶಾಸಕರಿಗೆ 100 ಕೋಟಿ ರೂಪಾಯಿ ಹಾಗೂ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡುವ ಆಮಿಷ ಒಡ್ಡಿದ್ದಾರೆ ಅಂತಾ ಆಪಾದಿಸಿದರು. ಪ್ರಧಾನಿ ಮೋದಿ, ದೇಶದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ಮಾತನಾಡುತ್ತಾರೆ. ಆದ್ರೆ, ಶಾಸಕರಿಗೆ 100 ಕೋಟಿ ರೂಪಾಯಿ ಕೊಡುವ ಆಮಿಷವೊಡ್ಡುತ್ತಿದ್ದಾರೆ. ಇದು ಕಪ್ಪು ಹಣವೋ? ಬಿಳಿ ಹಣವೋ ? ಉತ್ತರಿಸಿ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಉಪದೇಶ ಮಾಡುತ್ತಾರೆ. ಆದ್ರೆ, ಬಿಜೆಪಿಗೆ ಸ್ಪಷ್ಟ ಬಹುಮತ ವಿಲ್ಲದಿದ್ರೂ ನಾವು ಸರ್ಕಾರ ರಚಿಸುತ್ತೇವೆ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಕಾಂಗ್ರೆಸ್ ನಮ್ಮ ಜೊತೆ ಕೈ ಜೋಡಿಸಿರುವುದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕು ಅನ್ನೋ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿಲ್ಲ. ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಅವಕಾಶ ನಾಡಿನ ಜನತೆ ನನಗೆ ಕೊಟ್ಟಿರುವುದು. ನಮ್ಮ ಮೈತ್ರಿಗೆ ಸ್ಪಷ್ಟ ಬಹುಮತವಿದ್ದು, ರಾಜ್ಯಪಾಲರು ನಮಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

👍👍 ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಪೇಜ್ ಲೈಕ್ ಮಾಡಿ 👍👍

>
%d bloggers like this: