ಇಂದಿನಿಂದ ಬೆಂಗಳೂರಿನಲ್ಲಿ ಪ್ರಾರಂಭವಾಗುತ್ತಿದೆ, “ನಮ್ಮ ಅಪ್ಪಾಜಿ ಕ್ಯಾಂಟಿನ್”

ಬೆಂಗಳೂರು: ಬೆಂಗಳೂರಿನಲ್ಲಿ ಈಗ ಜನಸಾಮಾನ್ಯರು ಬದುಕಲು ಕಷ್ಟವಾಗುತ್ತಿದೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗುತ್ತಿದ್ದ ಕಾರಣ ಊಟೋಪಾಹಾರಗಳ ಬೆಲೆಯೂ ಹೆಚ್ಚುತ್ತಿದೆ. ಈ ಕಾರಣದಿಂದ ಬೆಂಗಳೂರಿನ ಜನರಿಗೆ ಅನುಕೂಲವಾಗುವಂತೆ ಈಗ “ನಮ್ಮ ಅಪ್ಪಾಜಿ ಕ್ಯಾಂಟಿನ್” ಆರಂಭವಾಗುತ್ತಿದೆ.

ಈ “ನಮ್ಮ ಅಪ್ಪಾಜಿ ಕ್ಯಾಂಟಿನ್” ಜೆಡಿಎಸ್ ನ ಎಂ ಎಲ್ ಸಿ ಶರವಣ ಅವರ ನೇತೃತ್ವದಲ್ಲಿ ಪ್ರಾರಂಭವಾಗಲಿದೆ. ಮುಂದೆ ಓದಿ..

namma appaji canteen started in bengaluru - kannada naadi news

namma appaji canteen started in bengaluru - kannada naadi news

namma appaji canteen started in bengaluru - kannada naadi news

“ಶ್ರೀಸಾಯಿ ಸಮರ್ಪಣ ಚಾರಿಟೆಬಲ್” ವತಿಯಿಂದ “ನಮ್ಮ ಅಪ್ಪಾಜಿ ಕ್ಯಾಂಟೀನ್” ಯೋಜನೆ ಕಾರ್ಯರೂಪಕ್ಕೆ ಬರುತ್ತಿದೆ. ಪ್ರಾರಂಭದಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತನಗರದಲ್ಲಿ ಕ್ಯಾಂಟೀನ್ ಆರಂಭವಾಗುತ್ತಿದ್ದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ಇಂದು ಬೆಳಗ್ಗೆ 11 ಗಂಟೆಗೆ ಕ್ಯಾಂಟೀನ್‍ಗೆ ಚಾಲನೆ ನೀಡಲಿದ್ದು,ಉದ್ಘಾಟನಾ ಕಾರ್ಯಕ್ರಮದಲ್ಲಿ ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮ ದೇವೇಗೌಡರು ಆಗಮಿಸಲಿದ್ದಾರೆ. ಮುಂದೆ ಓದಿ..

ಮುಂದಿನ ದಿನಗಳಲ್ಲಿ ಈ ಕ್ಯಾಂಟೀನ್ ನಗರದ 27 ವಿಧಾನಸಭಾ ಕ್ಷೇತ್ರದಲ್ಲೂ ವಿಸ್ತರಿಸಲು ಟಿ.ಎ.ಶರವಣ ನಿರ್ಧರಿಸಿದ್ದಾರೆ.

5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್ ಹಾಗೆ 10 ರೂ.ಗೆ ಪೊಂಗಲ್, ಮುದ್ದೆ-ಬಸ್ಸಾರು, ಅನ್ನ ಸಾಂಬಾರ್, ರೈಸ್ ಬಾತ್. 3 ರೂಪಾಯಿಗೆ ಬಿಸಿಬಿಸಿ ಕಾಫಿ-ಟೀ ಈ ಕ್ಯಾಂಟೀನ್‍ನಲ್ಲಿ ಸಿಗಲಿದೆ. ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರುತ್ತದೆ. ನಮ್ಮ ಅಪ್ಪಾಜಿ ಕ್ಯಾಂಟೀನ್‍ನಲ್ಲಿಯೇ ಅಡುಗೆ ತಯಾರಿ ಮಾಲಾಗುತ್ತದೆ. 10 ಲಕ್ಷ ರೂ. ವೆಚ್ಚದಲ್ಲಿ ನಮ್ಮ ಅಪ್ಪಾಜಿ ಕ್ಯಾಂಟೀನ್ ನಿರ್ಮಾಣಗೊಂಡಿದೆ. ಆರಂಭದಲ್ಲಿ ಸಾವಿರ ಮಂದಿಗೆ ತಿಂಡಿ, ಊಟದ ವ್ಯವಸ್ಥೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.