ಮಾತು ತಪ್ಪದ ಬಿ ಎಸ್ ​ವೈ : 24 ಘಂಟೆ ಅಲ್ಲ, 1 ಘಂಟೆಯಲ್ಲೇ ರಾಜ್ಯ ರೈತರ ಸಾಲ ಮನ್ನಾ ಮಾಡಿದ ಬಿ ಎಸ್ ​ವೈ..!!

ಬೆಂಗಳೂರು: ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದಂತೆಯೇ ಸಿಎಂ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಅಧಿಕಾರ ಸ್ವೀಕರಿಸಿದ ಕೆಲ ಹೊತ್ತಿನಲ್ಲೇ ಅನ್ನದಾತರ ಸಾಲ ಮನ್ನಾ ಪತ್ರಕ್ಕೆ ಸಹಿ ಹಾಕಿದ್ದಾರೆ. ಒಂದು ಲಕ್ಷ ರೂಪಾಯಿ ವರೆಗೆ ರಾಷ್ಟ್ರೀಯ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲವನ್ನು ಬಿಎಸ್​ವೈ ಮನ್ನಾ ಮಾಡಿದ್ದಾರೆ.

ಕೊಟ್ಟ ಮಾತಿನಂತೆ ಸಿಎಂ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಅಧಿಕಾರ ಸ್ವೀಕರಿಸಿ ಒಂದು ತಾಸಿನಲ್ಲೇ ರೈತರ ಸಾಲ ಮನ್ನಾ ಮಾಡಿದ್ದಾರೆ. ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆ ಬಳಿಕ ರೈತರ ಸಾಲಮನ್ನಾ ದಾಖಲೆಗಳಿಗೆ ಸಿಎಂ ಯಡಿಯೂರಪ್ಪ ಸಹಿ ಹಾಕಿದ್ದಾರೆ.

ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿರುವ ರಾಜ್ಯ ರೈತರ 1 ಲಕ್ಷ ರೂ.ವರೆಗಿನ ಸಾಲವನ್ನು ಯಡಿಯೂರಪ್ಪ ಮನ್ನಾ ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆಯಲ್ಲಿ ಈ ಬಗ್ಗೆ ಹೇಳಿತ್ತು. ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದರು. ಆದ್ರೆ 1 ಗಂಟೆಯಲ್ಲೇ ಸಾಲ ಮನ್ನಾ ಮಾಡಿ ಭರವಸೆ ಈಡೇರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ನೂತನ ಸಿಎಂ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆದರೆ, ಸದನದಲ್ಲಿ ಬಹುಮತ ಸಾಬೀತು ನಂತರ ಮನಿ ಬಿಲ್ ಪಾಸ್ ಆಗಬೇಕು. ಅದಾದ ನಂತರವೇ ಈ ಆದೇಶ ಸಿಂಧು ಆಗುತ್ತದೆ ಎನ್ನಲಾಗಿದೆ.

👍👍 ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಪೇಜ್ ಲೈಕ್ ಮಾಡಿ 👍👍