ಸೈನಾ vs ಸಿಂಧು ಫೈಟ್ ನಲ್ಲಿ ಸೈನಾ ಗೆ ಚಿನ್ನ, ಸಿಂಧು ಗೆ ಬೆಳ್ಳಿ..!

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಭಾರತದ ಸ್ಪರ್ಧಿಗಳ ಪದಕ ಬೇಟೆ ಮುಂದುವರೆದಿದ್ದು, ಬ್ಯಾಡ್ಮಿಂಟನ್ ನಲ್ಲಿ ಸೈನಾ ನೆಹ್ವಾಲ್ ಚಿನ್ನದ ಪದಕ ಗಳಿಸಿದ್ದು, ಪಿ.ವಿ. ಸಿಂಧು ಬೆಳ್ಳಿ ಪದಕ ಗಳಿಸಿದ್ದಾರೆ.

ತೀವ್ರ ಹಣಾಹಣಿಯಿಂದ ಕೂಡಿದ್ದ ಪಂದ್ಯದಲ್ಲಿ ಹೈದರಾಬಾದ್ ಆಟಗಾರ್ತಿಯರಾದ ಸೈನಾ–ಸಿಂಧು ಗೆಲುವಿಗೆ ಪೈಪೋಟಿ ನಡೆಸಿದ್ದಾರೆ. ಅಂತಿಮವಾಗಿ 21-18, 23-21 ನೇರ ಸೆಟ್ ಗಳಿಂದ ಸೋಲಿಸಿ ಸೈನಾ ಚಿನ್ನದ ಪದಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟೇಬಲ್ ಟೆನ್ನಿಸ್ ಮಿಕ್ಸೆಡ್ ಡಬಲ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಕಂಚಿನ ಪದಕ ಗಳಿಸಿದ್ದಾರೆ. ಇದರೊಂದಿಗೆ ಭಾರತ ಒಟ್ಟು 62 ಪದಕ ಗಳಿಸಿದೆ. ಇದರಲ್ಲಿ 26 ಚಿನ್ನ, 17 ಬೆಳ್ಳಿ ಹಾಗೂ 19 ಕಂಚಿನ ಪದಕ ಸೇರಿವೆ.

👍👍 ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಪೇಜ್ ಲೈಕ್ ಮಾಡಿ 👍👍

>
%d bloggers like this: