ಕುತೂಹಲ ಕೆರಳಿಸಿದ್ದ ಪ್ರಧಾನಿ ಮೋದಿಯ ಫಿಟ್‌ನೆಸ್ ಚ್ಯಾಲೆಂಜ್ ವೀಡಿಯೋ ಆಯ್ತು ವೈರಲ್..! ಮೋದಿ ನಾಮಿನೇಟ್ ಮಾಡಿದ ಆ ಇಬ್ಬರು ಸ್ಪೆಶಲ್ ವ್ಯಕ್ತಿಗಳು ಯಾರು ಗೊತ್ತಾ..?

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರ ಸವಾಲನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಈಗ ತಮ್ಮ ಫಿಟ್ನೆಸ್ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಸವಾಲನ್ನು ಸ್ವೀಕರಿಸಿದ ಮೋದಿ ಯಾರೂ ಊಹಿಸಲಾಗದಂತಹ ಇಬ್ಬರು ಸ್ಪೆಷಲ್ ವ್ಯಕ್ತಿಗಳನ್ನು ನಾಮಿನೇಟ್ ಮಾಡಿದ್ದಾರೆ. ಅವರೇ ನಮ್ಮ ಕರ್ನಾಟಕದ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಅಂತರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾರ್ತಿ ಮಣಿಕ ಬಾತ್ರಾ ಅವರಿಗೆ ಚಾಲೆಂಜ್ ನೀಡಿದ್ದಾರೆ.

ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22ರಂದು, “ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit) ನೀವು ನಿಮ್ಮ ಫಿಟ್ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ” ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಫಿಟ್ ನೆಸ್ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಗೆ ವಿರಾಟ್ ಕೊಹ್ಲಿ ವಿಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಚಾಲೆಂಜ್ ಸ್ವೀಕರಿಸಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ, ಪತ್ನಿ ಅನುಷ್ಕಾ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರಿಗೆ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.

ಇದೀಗ ಮೋದಿಯವರು ತಮ್ಮ ಫಿಟ್ನೆಸ್ ವಿಡಿಯೋ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಮೋದಿ ವಿಡಿಯೋ ಹಾಕಿ ಅದ್ದಕ್ಕೆ, “ಇದು ನನ್ನ ಬೆಳಗ್ಗಿನ ವ್ಯಾಯಾಮಗಳು. ಯೋಗ ಹೊರತಾಗಿ ಪಂಚಭೂತಗಳಾದ ಪೃಥ್ವಿ, ಜಲ, ಅಗ್ನಿ, ವಾಯು ಹಾಗೂ ಆಕಾಶದಿಂದ ಪ್ರೇರಣೆಗೊಂಡು ನಾನು ಟ್ರ್ಯಾಕ್‍ಗಳ ಮೇಲೆ ನಡೆಯುತ್ತೇನೆ. ಇದರ ಜೊತೆ ನಾನು ಉಸಿರಾಟದ ವ್ಯಾಯಾಮವನ್ನು ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

 

ವಿಡಿಯೋ ಅಪ್ಲೋಡ್ ಮಾಡಿದ ನಂತರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಶ್ರೀ ಹೆಚ್.ಡಿ ಕುಮಾರಸ್ವಾಮಿ ಹಾಗೂ ಭಾರತದ ಹೆಮ್ಮೆಯ ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ಈ ಚಾಲೆಂಜ್ ನೀಡಿದ್ದಾರೆ.

ನಾನು ಪ್ರತಿಯೊಬ್ಬ ಭಾರತಿಯರಿಗೆ ತಮ್ಮ ಫಿಟ್ನೆಸ್ ಕಡೆ ಗಮನ ಕೊಡಬೇಕು ಎಂದು ಕೇಳಿಕೊಳ್ಳುತ್ತೇನೆ. ನಿಮಗೆ ಯಾವ ವ್ಯಾಯಾಮ ಸುಲಭವಾಗುತ್ತದೋ ಆ ವ್ಯಾಯಾಮವನ್ನು ಮಾಡಿ. ಆಗ ನೀವು ನಿಮ್ಮ ಜೀವನದಲ್ಲಿ ಒಳ್ಳೆಯ ಬದಲಾವಣೆಗಳನ್ನು ಕಾಣಬಹುದು ಎಂದು ಪ್ರಧಾನಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಕನ್ನಡನಾಡಿ.com ಪೇಜ್ ಲೈಕ್ ಮಾಡಿ..