3ನೇ ನಿರ್ಣಾಯಕ ಪಂದ್ಯದಲ್ಲಿ ರೋಹಿತ್ ಶರ್ಮಾ ಸಿಡಿಲಬ್ಬರದ ಶತಕ : ಇಂಗ್ಲೆಂಡ್ ವಿರುದ್ದ ಟಿ-20 ಸೀರೀಸ್ ಗೆದ್ದು ಬೀಗಿದ ಭಾರತ…!

ಭಾರತ ತಂಡದ ಸ್ಪೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರು ಸಿಡಿಸಿದ ಭರ್ಜರಿ ಅಜೇಯ ಶತಕದ ನೆರವಿನಿಂದ ಇಂಗ್ಲೆಂಡಿನ ಬ್ರಿಸ್ಬೇನ್ ನಲ್ಲಿ ನಡೆದ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೂರು ಪಂದ್ಯಗಳು ಟ್ವೆಂಟಿ ಟ್ವೆಂಟಿ ಸೀರೀಸ್‌ ಅನ್ನು 2-1 ಗಳ ಅಂತರದಿಂದ ಗೆದ್ದು ಸರಣಿ ತಮ್ಮದಾಗಿಸಿಕೊಂಡಿದೆ.

ಭಾರತದ ಗೆಲುವಿನಲ್ಲಿ ಭಾರತ ತಂಡದ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರಮುಖ ಪಾತ್ರ ವಹಿಸಿದೆ.ಕೇವಲ 56 ಎಸೆತಗಳಲ್ಲಿ ಅಜೇಯ  ಶತಕ ಸಿಡಿಸಿದರು. ಇಂಗ್ಲೆಂಡ್ ನೀಡಿದ್ದ 199 ರನ್’ಗಳನ್ನು ಅನಾಯಾಸವಾಗಿ ಮೆಟ್ಟಿನಿಂತ ಭಾರತ ಇನ್ನೊಂದು ಓವರ್ ಬಾಕಿಯಿರುವಂತೆಯೇ ಭರ್ಜರಿ ಜಯ ಸಾಧಿಸಿದೆ. ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್’ನಲ್ಲಿ ಮೂರನೇ ಶತಕ ಸಿಡಿಸಿದ ಮೊದಲ ಕ್ರಿಕೆಟಿಗ ಎಂಬ ದಾಖಲೆಯನ್ನು ನಿರ್ಮಿಸಿದರು.

ಮೂರನೇ ಓವರ್’ನ ಮೊದಲ ಎಸೆತದಲ್ಲೇ ಧವನ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಆ ಬಳಿಕ ಜತೆಯಾದ ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ 41 ರನ್’ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರಾಹುಲ್ 19 ರನ್ ಬಾರಿಸಿ ಜೋರ್ಡನ್ ಹಿಡಿದ ಅದ್ಭುತ ಕ್ಯಾಚ್’ಗೆ ಪೆವಿಲಿಯನ್ ಸೇರಿದರು. ಇದಾದ ನಂತರ ಸ್ಫೋಟಕ ಜತೆಯಾಟವಾಡಿದ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 89 ರನ್’ಗಳ ಜತೆಯಾಟವಾಡುವ ಮೂಲಕ ತಂಡವನ್ನು ನೂರರ ಗಡಿ ದಾಟಿಸಿದರು. ಇದೇ ವೇಳೆ ರೋಹಿತ್ ಎರಡು ಸಾವಿರ ರನ್ ಪೂರೈಸಿದ ಸಾಧನೆಯನ್ನು ಮಾಡಿದರು.

ನಾಯಕ ವಿರಾಟ್ ಕೊಹ್ಲಿ 29 ಎಸೆತಗಳಲ್ಲಿ 43 ರನ್ ಸಿಡಿಸಿದರೆ, ರೋಹಿತ್ 56 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್’ಗಳ ನೆರವಿನಿಂದ ಅಜೇಯ 100 ರನ್ ಬಾರಿಸಿದರು. ಕೊನೆಯಲ್ಲಿ ಆರ್ಭಟಿಸಿದ ಪಾಂಡ್ಯ 14 ಎಸೆತಗಳಲ್ಲಿ 33 ರನ್ ಚಚ್ಚಿ ತಂಡವನ್ನು ಗೆಲುವಿನ ದಡ ಸೇರಿಸಿದರು.ಭರ್ಜರಿ ಬ್ಯಾಟಿಂಗ್ ಸಿಡಿಸಿದ ರೋಹಿತ್ ಶರ್ಮಾ ಅವರು ಮ್ಯಾನ್ ಆಫ್ ದಿ ಮ್ಯಾಚ್ ಆದರು.ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ಸರಣಿಯನ್ನು ಎರಡು ಮತ್ತು ಒಂದರಿಂದ ಕೈವಶ ಮಾಡಿಕೊಂಡಿತು.

ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಕನ್ನಡನಾಡಿ.com ಪೇಜ್ ಲೈಕ್ ಮಾಡಿ..